ಪ್ರಗತಿವಾಹಿನಿ ಸುದ್ದಿ; ಇಂಫಾಲ್: ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ಆರಂಭವಾದ ಹಿಂಸಾಚಾರ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ಸಂತ್ರಸ್ತ ಮಹಿಳೆಯರು ಊರನ್ನು ತೊರೆದು ಬೇರೆ ಜಿಲ್ಲೆಗೆ ಹೋಗಿ ಘಟನೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಮೇ 4ರಂದು ಮಣಿಪುರದ ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದ ದುಷ್ಕರ್ಮಿಗಳು, ಅತ್ಯಾಚಾರವೆಸಗಿದ್ದರು. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳು ತೀವ್ರವಾಗಿ ಖಂಡಿಸಿದ್ದಾರೆ.
ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತೌಬಲ್ ಜಿಲ್ಲೆಯ 32 ವರ್ಷದ ಹೆರಾದಾಸ್, 38 ವರ್ಷದ ಇಬುಂಗೋ ಅಲಿಯಾಸ್ ಅಬ್ದುಲ್ ಹಿಲಿಮ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಈ ನಡುವೆ ಪ್ರಮುಖ ಆರೋಪಿಯ ಚುರಾಚಂದ್ ಜಿಲ್ಲೆಯಲ್ಲಿರುವ ಮನೆಗೆ ಸ್ಥಳೀಯ ಮಹಿಳೆಯರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ