Kannada NewsKarnataka NewsLatestPolitics

*ದೇಶದ ಇತಿಹಾಸದಲ್ಲೇ ಇದೇ ಮೊದಲ ಘಟನೆ; ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕತ್ವದ ಮಹತ್ವ ಗೊತ್ತಿಲ್ಲ; ಡಿ.ಕೆ.ಶಿವಕುಮಾರ್ ಕಿಡಿ*

ನಮ್ಮ ಸರ್ಕಾರದ ಗ್ಯಾರಂಟಿ ಜಾರಿಯಿಂದ ಬಿಜೆಪಿ ನಾಯಕರು ಆಘಾತಕ್ಕೊಳಗಾಗಿದ್ದಾರೆ ಎಂದ ಡಿಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿಗೆ ಸದನವನ್ನು ಎದುರಿಸುವ ಧೈರ್ಯವಿರಲಿಲ್ಲ. ಧೈರ್ಯ ಇದ್ದಿದ್ದರೆ ಸದನದ ಚರ್ಚೆಯಲ್ಲಿ ಭಾಗವಹಿಸುತ್ತಿದ್ದರು. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಿರುವುದನ್ನು ಕಂಡು ಬಿಜೆಪಿ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ. ಹೀಗಾಗಿ ಅನಗತ್ಯ ವಿಚಾರವಾಗಿ ಗದ್ದಲ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕತ್ವದ ಮಹತ್ವ ಗೊತ್ತಿಲ್ಲ. ಇದು ಸಂವಿಧಾನಿಕ ಹುದ್ದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಬಜೆಟ್ ಅಧಿವೇಶನ ಹಾಗೂ ರಾಜ್ಯಪಾಲರ ಭಾಷಣ ವಿರೋಧ ಪಕ್ಷದ ನಾಯಕರ ಅನುಪಸ್ಥಿತಿಯಲ್ಲಿ ನಡೆದಿದೆ. ರಾಜಕೀಯವಾಗಿ ತಮ್ಮ ಅಸ್ತಿತ್ವ ತೋರಿಸಲು ಧರಣಿಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಅವರ ಜಂಟಿ ಸುದ್ದಿಗೋಷ್ಠಿ ಹಾಗೂ ಆ ಬಗ್ಗೆ ಅವರದೇ ಪಕ್ಷದ ನಾಯಕರ ಅಸಮಾಧಾನದ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ‘ಅದು ಅವರಿಗೆ ಬಿಟ್ಟ ವಿಚಾರ. ಆ ಬಗ್ಗೆ ನಾವು ಮಾತನಾಡುವುದಿಲ್ಲ. ಜಾತ್ಯಾತೀತತೆ ವಿಚಾರವಾಗಿ ದೇವೇಗೌಡರು ತಮ್ಮ ಪುಸ್ತಕದಲ್ಲಿ ಹೇಳಿಕೊಂಡಿದ್ದಾರೆ. ದೇವೇಗೌಡರೇನು ತಮ್ಮ ಸಿದ್ಧಾಂತ ಬದಲಿಸಿದ್ದಾರಾ? ಪಕ್ಷದ ಸಿದ್ಧಾಂತ, ಮೈತ್ರಿ ವಿಚಾರವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಮಾತನಾಡಲಿ’ ಎಂದರು.

ತಮಿಳುನಾಡು ಸಚಿವರು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಪತ್ರ ಬರೆದು ಕರ್ನಾಟಕದಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕೇಳಿರುವ ಬಗ್ಗೆ ಪ್ರಶ್ನಿಸಿದಾಗ, ‘ಕರ್ನಾಟಕದಲ್ಲಿ ಈ ಬಾರಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಆದರೂ ಇರುವ ನೀರಿನಲ್ಲೇ ಹರಿಸುವ ಸಾಧ್ಯತೆ ಬಗ್ಗೆ ಪರಿಶೀಲಿಸಬಹುದು. ಈ ತೀರ್ಮಾನ ಕಾವೇರಿ ಪ್ರಾಧಿಕಾರದ ಬಳಿ ಇದ್ದು, ನಾವು ಅದರ ತೀರ್ಮಾನ ಗೌರವಿಸುತ್ತೇವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button