ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದ ಜನರಿಗೆ ಹಾಲಿನ ದರ ಏರಿಕೆ ಶಾಕ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಾಲಿನ ದರ ಏರಿಕೆಗೆ ನಿರ್ಧರಿಸಲಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಾಲು ಒಕ್ಕೂಟಗಳ ಹಾಗೂ ಕೆ ಎಂ ಎಫ್ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಪರಿಷ್ಕೃತ ದರ ಆಗಸ್ಟ್ 1ರಿಂದ ಜಾರಿಗೆ ಬರಲಿದೆ.
ನಂದಿನಿ ಹಾಲಿನ ದರ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆ ಎಂ ಎಫ್ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲು ಸರ್ಕಾರ ಸಮ್ಮತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ