ಪ್ರಗತಿವಾಹಿನಿ ಸುದ್ದಿ;
ಮುಂಬೈ: ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಇಂದು ವರುಣಾರ್ಭಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಹಾರಾಷ್ಟ್ರದ ಪಾಲ್ಘರ್, ಥಾಣೆ, ರಾಯಗಢ, ರತ್ನಗಿರಿ, ಸಿಂಧುದುರ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದೆ.
ಪಶ್ಚಿಮ ಘಟ್ಟ, ಮಹಾರಾಷ್ಟ್ರದ ಭಾಗಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಹಲವು ದುರಂತಗಳು ಸಂಭವಿಸಿವೆ. ರಾಯಗಢದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 22ಕ್ಕು ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ