ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅರ್ಜಿ ಸಲ್ಲಿಕೆ ಆರಂಭವಾಗಿ ಕೇವಲ ಮೂರು ದಿನಗಳಲ್ಲಿ ಲಕ್ಷಾಂತರ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಮೂರು ದಿನಗಳಲ್ಲಿ ರಾಜ್ಯಾದ್ಯಂತ 22,90,782 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ.
ಗೃಹಲಕ್ಷ್ಮೀ ನೊಂದಣಿ ಜುಲೈ 19ರಂದು ಆರಂಭವಾಗಿದ್ದು, ಕಳೆದ ಮೂರು ದಿನಗಳಲ್ಲಿ ಒಟ್ಟು 22,90,782 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ