Kannada NewsKarnataka NewsLatest

*ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; 9 ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಮುಂಜಾಗೃತ ಕ್ರಮವಾಗಿ ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಹಾಸನ, ಹಾವೇರಿ, ಧಾರವಾಡ, ದಾವಣಗೆರೆ, ಉಡುಪಿ ಸೇರಿದಂತೆ 9 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹಾಸನದಲ್ಲಿ ಐದು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಹಾಗೂ ಹಾಸನದಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಿ ಜಿಲ್ಲಾದ್ಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಉಡುಪಿಯ ಬೈಂದೂರಿನಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ

ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ ಆರ್ಭಟ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆರಜೆ ಘೋಷಣೆ ಮಾಡಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button