*ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಾಂಶುಪಾಲ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಬೀದರ್: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದಲ್ಲಿ ನಡೆದಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶಟ್ಟಿ ಕುಲ್ಕರ್ಣಿ ಬಂಧಿತ ಆರೋಪಿ. ಹುಟ್ಟುಹಬ್ಬದ ಹೆಸರಲ್ಲಿ ಸ್ವೀಟ್ ಕೊಡುವುದಾಗಿ ಹೇಳಿ ವಿದ್ಯಾರ್ಥಿನಿಯರನ್ನು ಮನೆಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಪ್ರಿನ್ಸಿಪಾಲ್ ನಾಗಶೆಟ್ಟಿ ವಿರುದ್ಧ ಕೇಳಿಬಂದಿದೆ.
ಜುಲೈ 7ರಂದು ಪ್ರಿನ್ಸಿಪಾಲ್ ತಮ್ಮನ್ನು ಮನೆಗೆ ಕರೆದು ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸ್ವೀಟ್ ಕೊಡುವುದಾಗಿ ಹೇಳಿದ್ದಾರೆ. ಮನೆಗೆ ಕರೆದು ಅನುಚಿತವಾಗಿ ವರ್ತಿಸಿದ್ದು, ಓರ್ವ ಬಾಲಕಿಯ ಕೈ ಹಿಡಿದು ಎಳೆದು ಚುಂಬಿಸಿದ್ದಾಗಿ ನಾಲ್ವರು ವಿದ್ಯಾರ್ಥಿನಿಯರು ಜುಲೈ 20ರಂದು ಚಿಟಗುಪ್ಪ ಪೊಲಿಸ್ ಠಾಣೆಯಲ್ಲಿ ದೂರು ನೀಡಿದ್ದರು.
ವಿದ್ಯಾರ್ಥಿನಿಯರ ದೂರಿನ ಆಧಾರದ ಮೇಲೆ ಪ್ರಾಂಶುಪಾಲ ನಾಗಶೆಟ್ಟಿ ಕುಲ್ಕರ್ಣಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪ್ರಾಂಶುಪಾಲರನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ