Belagavi NewsBelgaum NewsKannada NewsKarnataka NewsLatest

*ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ವಿಚಾರ; ಸಂಸತ್ ನಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದ ಅಣ್ಣಾಸಾಹೇಬ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಯವರ ಪ್ರಶ್ನೆಗೆ ಶಿಕ್ಷಣ ರಾಜ್ಯ ಸಚಿವರಾದ ಡಾ. ಸುಭಾಷ ಸರ್ಕಾರ್ ರವರು ಉತ್ತರಿಸಿದ್ದಾರೆ.

ದಿನಾಂಕ: 1.4.2023 ರಂತೆ ಶಿಕ್ಷಣ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 5825 ಬೋಧಕ ಹುದ್ದೆಗಳು ಮತ್ತು 15390 ಬೋಧಕೇತರ ಖಾಲಿ ಹುದ್ದೆಗಳಿದ್ದು ಇವುಗಳನ್ನು ಭರ್ತಿ ಮಾಡುವ ನಿರಂತರ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ನಿವೃತ್ತಿ, ರಾಜೀರಾಮೆ, ವರ್ಧಿತ ವಿದ್ಯಾರ್ಥಿಗಳ ಬಲದ ಕಾರಣದಿಂದಾಗಿ ಹೆಚ್ಚುವರಿ ಹುದ್ದೆಗಳ ಭರ್ತಿ ಈ ಕಾರಣಗಳಿದ್ದಾಗಿ ಖಾಲಿ ಹುದ್ದೆಗಳು ಉದ್ಭವಿಸುತ್ತಿವೆ. ಶಿಕ್ಷಣ ಸಚಿವಾಲಯ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಇದನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಹಾಗೂ ಹುದ್ದೆಗಳನ್ನು ಭರ್ತಿ ಮಾಡುವ ಜವಾಬ್ದಾರಿಯು ಶಿಕ್ಷಣ ಸಚಿವಾಲಯ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮೇಲಿದೆ. ಶಿಕ್ಷಣ ಸಚಿವಾಲಯವು ಯುಜಿಸಿ ಮತ್ತು ಎಲ್ಲಾ ಸಿಯುಗಳಿಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ನಿರ್ದೇಶನ ನೀಡಿದೆ. ಇಲ್ಲಿಯವರೆಗೆ, 4000ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಮತ್ತು 1500 ಬೋಧಕೇತರ ಹುದ್ದೆಗಳು ಮಿಷನ್ ಮೋಡ್ ನೇಮಕಾತಿ ಡ್ರೈವ್ ಅಡಿಯಲ್ಲಿ ಭರ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button