ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಅವಾಂತರಗಳು ಸೃಷ್ಟಿಯಾಗಿವೆ. ಬೆಳಗಾವಿ ಜಿಲ್ಲೆಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಡಿದೆ. ಈ ನಡುವೆ ದೂಧಸಾಗರ ಬಳಿ ರೈಲ್ವೆ ಹಳಿಗಳ ಮೇಲೆ ಭೂಕುಸಿತ ಸಂಭವಿಸಿದ್ದು, ರೈಲು ಸಂಚಾರ ಸ್ಥಗಿತಗೊಂದಿದೆ.
ದೂಧಸಾಗರ ಜಲಪಾತದ ಬಳಿಯ ಸುರಂಗ ಮಾರ್ಗದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, ಗೋವಾಕ್ಕೆ ತೆರಳುವ ರೈಲುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಬೆಳಗಾವಿ- ಗೋವಾ ಮಾರ್ಗದ ಬಳಿಯ ಕ್ಯಾಸಲ್ ರಾಕ್ ಬಳಿ ರೈಲ್ವೆ ಹಳಿಗಳ ಮೇಲೆ ಗುಡ್ಡಕುಸಿದಿದ್ದು, ಹಳಿಗಳ ಮೇಲೆ ಅಪಾರ ಪ್ರಮಾಣದಲ್ಲಿ ಮಣ್ಣು, ಮರದ ದಿಣ್ಣೆಗಳು ಬಿದ್ದಿವೆ. ದೂಧ್ ಸಾಗರ್ ಬಳಿಯ ಮೂರನೇ ಸುರಂಗದಲ್ಲಿಯೇ ಗುಡ್ಡ ಕುಸಿದಿದ್ದು ಸಂಚಾರ ಸ್ಥಗಿತಗೊಂಡಿದೆ.
ಮಂಗಳವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಗೋವಾದಿಂದ ಬೆಳಗಾವಿ ಮಾರ್ಗವಾಗಿ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲು ಮಾರ್ಗ ಬದಲಾಯಿಸಲಾಗಿದೆ. ಇನ್ನು ದೆಹಲಿಯಿಮ್ದ ಮೀರಜ್ ಮಾರ್ಗವಾಗಿ ಬಂದ ರೈಲನ್ನು ಬೆಳಗವೈಯಲ್ಲಿ ನಿಲುಗಡೆ ಮಾಡಲಾಗಿದ್ದು, ಅಲ್ಲಿಂದ ಬಸ್ ಮೂಲಕ ಗೋವಾಕ್ಕೆ ಪ್ರಯಾಣಿಕರನ್ನು ಕಳುಹಿಸಲಾಗಿದೆ. ಭೂಕುಸಿತ ಹಿನ್ನೆಲೆಯಲ್ಲಿ ಬೆಳಗಾವಿ-ಗೋವಾ ಮಾರ್ಗದ ರೈಲು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ