Uncategorized

*ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ*

ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಚರ್ಚೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.

ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ನಿತಿನ್ ಗಡ್ಕರಿ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.

ಗೊಂದಲ ಇರುವ ಬಗ್ಗೆ ನಾವು ಪರಿಹಾರ ಕಂಡುಕೊಂಡಿದ್ದೇವೆ. ಸ್ಪಷ್ಟವಾದ ಪ್ರಸ್ತಾವನೆಯೊಂದಿಗೆ ದೆಹಲಿಗೆ ಮತ್ತೊಮ್ಮೆ ಬರುತ್ತೇವೆ. ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಸಮಸ್ಯೆ ಇದೆ. ಒಂದು ಎಕರೆ ಜಮೀನು ಸಮಸ್ಯೆ ಇರಬಾರದು. ರಾಜ್ಯದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದ್ದು, ಸಿಎಂ ಸಿದ್ಧರಾಮಯ್ಯ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.


38 ರಾಷ್ಟ್ರೀಯ ಹೆದ್ದಾರಿಗಳು ಅಪ್​ಗ್ರೇಡ್ ಆಗಬೇಕಿದೆ. ಬೆಂಗಳೂರಿನಲ್ಲಿ ಸುರಂಗ ನಿರ್ಮಿಸುವ ಬಗ್ಗೆ ಆಸಕ್ತಿ ವಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದಾರೆ. ಅಂತಿಮವಾದ ಪ್ರಸ್ತಾವನೆ ಮುಂದಿನ ದಿನಗಳಲ್ಲಿ ಇಡಲಿದ್ದೇವೆ. ಯಾರು ಹಣ ಹೂಡಿಕೆ ಮಾಡಬೇಕೆಂದು ನಿರ್ಧಾರ ಮಾಡಬೇಕು ಎಂದರು.

ಏನೇ ಸಮಸ್ಯೆ ಇದರೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ: ಸಚಿವರ ವಿರುದ್ಧ ಕಾಂಗ್ರೆಸ್​ ಶಾಸಕರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾಳೆ ಸಿಎಲ್​ಪಿ ಸಭೆಯಲ್ಲಿ ಎಲ್ಲವೂ ಚರ್ಚೆ ಮಾಡಲಾಗುವುದು. ಏನೇ ಸಮಸ್ಯೆ ಇದ್ದರೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಬಹುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಗೆಹರಿಸುತ್ತಾರೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button