ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ.
ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಚಂದ್ರದ್ರೋಣ ಪರ್ವತದಲ್ಲಿ ಗುಡ್ಡಕುಸಿದಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಅಲ್ಲದೇ ಪರ್ವತಗಳ ಸಾಲಿನಲ್ಲಿ ಮತ್ತಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ.
ಗುಡ್ಡ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನ ಹಳ್ಳಿ, ಕೆಮ್ಮಣ್ಣುಗುಂಡಿ, ಸೀತಾಳಯ್ಯನ ಗಿರಿ ಪ್ರದೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇನ್ನು ಗುಡ್ಡ ಕುಸಿತದಿಂದ ಮಣ್ಣು ತೆರವು ಕಾರ್ಯ ಮುಗಿಯುವವರೆಗೂ ಪ್ರವಾಸಿಗರಿಗೆ ಈ ತಾಣಗಳಿಗೆ ತೆರಳಲು ಅವಕಾಶವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ