ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರಧಾನ: ಪ್ರೊ. ವಿದ್ಯಾಶಂಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ೨೩ ನೇ ಘಟಿಕೋತ್ಸವ ಮಂಗಳವಾರ (ಆ.೦೧) ವಿಟಿಯು ಜ್ಞಾನ ಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರಧಾನ ಮಾಡಲಾಗುವುದು ಎಂದು ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ್ ಅವರು ತಿಳಿಸಿದರು.
ವಿಟಿಯು ಸೆನೆಟ್ ಸಭಾಂಗಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ೨೩ ನೇ ಘಟಿಕೋತ್ಸವದ ಕುರಿತು ಶುಕ್ರವಾರ (ಜು.೨೮) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ೨೩ ನೇ ಘಟಿಕೋತ್ಸವದಲ್ಲಿ ಗೌರವಾನ್ವಿತ ರಾಜ್ಯಪಾಲರು, ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಭಾರತೀಯ ತಂತ್ರಜ್ಞಾನ ಸಂಸ್ಥೆಯ ಮದ್ರಾಸ್, ನಿರ್ದೇಶಕರಾದ ಪ್ರೊ.ವಿ. ಕಾಮಕೋಟಿ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಸಚಿವರಾದ ಡಾ.ಎಂ.ಸಿ ಸುಧಾಕರ ಅವರು ಘಟಿಕೋತ್ಸವದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಗೌರವ ಡಾಕ್ಟರೇಟ್ ಪದವಿ ಪ್ರಧಾನ:
ಶ್ರೀ ಆದಚುಂಚನಗಿರಿ ಮಹಾಸಂಸ್ಥಾನದ ಮಠದ ಶ್ರೀಗಳು ಹಾಗೂ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು, ರಾಷ್ಟ್ರೀಯ ಶಿಕ್ಷಣ ಸಮಿತಿ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಎ.ವಿ.ಎಸ್. ಮೂರ್ತಿ ಹಾಗೂ ಮೈಸೂರು ಮೆಕ್ಯಾನಿಕ್ ಟೈಲ್ ಕಂಪನಿ ಲಿ. ಬೆಂಗಳೂರು ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರಿನ ಹೆಗ್ಗುಂಜಿ ರಾಜೀವ್ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಅಧ್ಯಕ್ಷರಾದ ಎಚ್.ಎಸ್.ಶೆಟ್ಟಿ ಅವರಿಗೆ “ಡಾಕ್ಟರ್ ಆಫ್ ಸೈನ್ಸ್” ಗೌರವ ಪದವಿ ಪ್ರಧಾನ ಮಾಡಲಾಗುವದು.
ಘಟಿಕೋತ್ಸವದಲ್ಲಿ ಬಿಇ/ಬಿಟೆಕ್- ೪೨,೫೪೫. (ಅಃಅS-೪೨,೨೩೯+ಓoಟಿ-ಅಃಅS ೩೦೬), ಬಿ.ಪ್ಲಾನ್ -೦೬ (ಅಃಅS ಔಟಿಟಥಿ), ಬಿ.ಆರ್ಕ್ -೧೦೦೩ (ಅಃಅS-೯೯೯+ಓoಟಿ-ಅಃಅS ೪) ಹಾಗೂ ಸಂಶೋಧನಾ ಪದವಿಗಳಾದ ೫೫೦ ಪಿಎಚ್ ಡಿ, ೦೪ ಎಂ.ಎಸ್.ಸಿ (ಇಟಿg) ಬೈ ರಿಸರ್ಚ್ ಮತ್ತು ೦೨ ಇಂಟಿಗ್ರೇಟೆಡ್ ಡ್ಯುಯಲ್ ಪದವಿಗಳು ಸೇರಿದಂತೆ ಒಟ್ಟು ೫೫೬ ಸಂಶೋಧನಾ ಪದವಿ ಪ್ರಧಾನ ಮಾಡಲಾಗುವದು.
ವಿದ್ಯಾರ್ಥಿಗಳಿಗೆ ಚಿನ್ನದ ಪದಕ:
ವಿವಿಧ ವಿಭಾಗಗಳಲ್ಲಿ ಚಿನ್ನದ ಪದಕ ಪಡೆದ ಮೊದಲ ೧೦ ಪದಕ ವಿಜೇತರಾದ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ, ಇನ್ಸ್‌ಟ್ಯೂಟ್ ಆಫ್ ಟೆಕ್ನಾಲಜಿ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮದಕಶಿರಾ ಚಿನ್ಮಯ ವಿಕಾಸ್ ಅವರಿಗೆ ೧೩ ಚಿನ್ನದ ಪದಕ, ಮೆಕ್ಕಾನಿಕಲ್ ಇಂಜಿನಿಯರಿಂಗ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಅಭಿಷೇಕ್.ಜಿ ೭ ಪದಕ, ಸರ್ ಎಂ. ವಿಶ್ವೇಶ್ವರಯ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಗುಡಿಕಲ್ ಸಾಯಿ ವಂಶಿ ೭, ಬಳ್ಳಾರಿಯ ಎಲೆಕ್ನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಕೆ. ಆರ್. ಸಂಪತ್ ಕುಮಾರ್ ೭ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ.
ಅದೇ ರೀತಿಯಲ್ಲಿ ಶಿವಮೊಗದ ಜವಾಹರಲಾಲ್ ನೆಹರು ನ್ಯಾಷನಲ್ ಕಾಲೇಜ ಇಂಜಿನಿಯರಿಂಗ್ ವಿಭಾಗದ ಪಾರ್ವತಿ ಸಲೇರಾ. ಜೆ ಅವರಿಗೆ ೬ ಪದಕ ಬೆಳಗಾವಿಯ ಕೆ.ಎಲ್.ಇ ಡಾ. ಎಂ. ಎಸ. ಶೇಷಗಿರಿ ಕಾಲೇಜು ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ವಿಭಾಗದ ಆವಂತಿಕಾ ಎ. ಸಾವಕಾರ್ ೫, ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಹರ್ಷತಾ ಆರ್ ೪ ಪದಕ ಹಾಗೂ ಸಾಯಿ ವಿದ್ಯಾ, ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಇನ್ಫರ್ಮೇಷನ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಇಶಿಕಾ ನವೀನ್ ೪, ಆಚಾರ್ಯ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿ, ಏರೋನಾಟಿಕಲ್ ಇಂಜಿನಿಯರಿಂಗ್ ವಿಭಾಗದ ಸಾಹಸ.ಎಸ್ ೨ ಪದಕ ಮತ್ತು ಆಚಾರ್ಯ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಮೈನಿಂಗ್ ಇಂಜಿನಿಯರಿಂಗ್ ವಿಭಾಗದ ಕೆಂಚೋ ಗೈಲ್ ತ್ಸೇನ್ ೨ ಚಿನ್ನದ ಪದಕ ಗಳಿಸಿರುತ್ತಾರೆ ಎಂದು ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ್.ಎಸ್ ಅವರು ತಿಳಿಸಿದರು.
ಕುಲಸಚಿವರಾದ ಬಿ.ಇ ರಂಗಸ್ವಾಮಿ, ಮೌಲ್ಯ ಮಾಪನ ಕುಲಸಚಿವರಾದ ಟಿ.ಎನ್ ಶ್ರೀನಿವಾಸ ಅವರು ಪತ್ರಿಕಾಗೋಷ್ಠಿಯಲ್ಲಿ ಉಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ