Kannada NewsKarnataka NewsLatestUncategorized

ಸಿಎಂ ಸಿದ್ದರಾಮಯ್ಯ ಉಡುಪಿ, ದಕ್ಷಿಣ ಕನ್ನಡ ಪ್ರವಾಸ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 1ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಗ್ಗೆ ಬೆಂಗಳೂರಿನಿಂದ ವಿಮಾನದಲ್ಲಿ ಬಜ್ಪೆ ವಿಮಾನ ನಿಲ್ದಾಣಕ್ಕೆ ತೆರಳಲಿರುವ ಸಿದ್ದರಾಮಯ್ಯ ಅಲ್ಲಿಂದ ರಸ್ತೆ ಮೂಲಕ ಉಡುಪಿಗೆ ತೆರಳಿ ಮಧ್ಯಾಹ್ನ 12.15ಕ್ಕೆ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.

Home add -Advt

ನಂತರ ಮಂಗಳೂರಿಗೆ ಆಗಮಿಸಿ ಸಂಜೆ 4.15ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ರಾತ್ರಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Related Articles

Back to top button