ಪ್ರಗತಿವಾಹಿನಿ ಸುದ್ದಿ; ಉಡುಪಿ: ಅರಿಶಿನಗುಂಡಿ ಜಲಪಾತದಲ್ಲಿ ಕಾಲು ಜಾರಿ ಬಿದ್ದಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಸತತ ಒಂದು ವಾರಗಳ ಕಾರ್ಯಾಚರಣೆ ಬಳಿಕ ಇಂದು ಜಲಪಾದಲ್ಲಿ ಯುವಕನ ಶವ ಪತ್ತೆಯಾಗಿದೆ.
ಉಡುಪಿಯ ಕೊಲ್ಲೂರಿನ ಅರಿಶಿನಗುಂಡಿ ಜಲಪಾತದ ಬಳಿ ಸ್ನೇಹಿತನೊಂದಿಗೆ ರೀಲ್ಸ್ ಮಾಡಲು ಹೋಗಿದ್ದ ಭದ್ರಾವತಿ ಮೂಲದ ಶರತ್ ಕುಮಾರ್, ಏಕಾಏಕಿ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಸುದ್ದಿ ತಿಳಿಯುತ್ತಿದ್ದಂತೆ ಘಟನಾಸ್ಥಳಕ್ಕೆ ಧಾವಿಸಿದ್ದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು, ಯುವಕ ಶರತ್ ಗಾಗಿ ಶೋಧ ನಡೆಸಿದ್ದರು. ಆದರೆ ಧಾರಾಕಾರ ಮಳೆ, ಧುಮ್ಮಿಕ್ಕಿ ಹರಿಯುವ ಜಲಪಾತದ ಅಬ್ಬರಕ್ಕೆ ಯುವಕನ ಪತ್ತೆ ಸಾಧ್ಯವಾಗಿರಲಿಲ್ಲ. ಆದರೂ ನಿರಂತರ ಶೋಧ ಮುಂದುವರೆಸಿದ್ದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಇದೀಗ ಯುವಕನ ಮೃತದೇಹ ಪತ್ತೆ ಮಾಡಿದ್ದಾರೆ.
ಅರಿಶಿನಗುಂಡಿ ಫಾಲ್ಸ್ ನಲ್ಲಿ 200 ಮೀಟರ್ ಆಳದಲ್ಲಿ ಕಲ್ಲಿನ ನಡುವೆ ಯುವಕನ ಮೃತದೇಹ ಸಿಕ್ಕಿಹಾಕಿಕೊಂಡಿತ್ತು. ಇದೀಗ ಯುವಕನ ಮೃತದೇಹ ಹೊರತೆಗೆಯಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ