Kannada NewsKarnataka NewsLatest

*ಸೇಡಿಗಾಗಿ ಮಕ್ಕಳಿಬ್ಬರಿಗೆ ವಿಷವುಣಿಸಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಂಚಾಯ್ತಿ ಚುನಾವಣೆಯಲ್ಲಿ ಆರಂಭವಾದ ರಾಜಕೀಯ ದ್ವೇಷಕ್ಕೆ ಮಕ್ಕಳಿಬ್ಬರು ಸಂಕಷ್ಟಕ್ಕೀಡಾಗಿದ್ದಾರೆ. ಪೋಷಕರ ಮೇಲಿನ ಸೇಡಿಗೆ ದುಷ್ಕರ್ಮಿಗಳು ಮಕ್ಕಳಿಬ್ಬರಿಗೆ ವಿಷವುಣಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿರುವ ದುಷ್ಕರ್ಮಿಗಳು, ಅನುಷ ಹಾಗೂ ಪಲ್ಲವಿ ಎಂಬ ಇಬ್ಬರು ಮಕ್ಕಳಿಗೆ ಬಲವಂತವಾಗಿ ವಿಷವುಣಿಸಿದ್ದಾರೆ. ಮಕ್ಕಳ ಸ್ಥಿತಿ ಗಂಭೀರವಾಗಿದೆ. ಪಂಚಾಯ್ತಿ ಅಧ್ಯಕ್ಷ ಸ್ಥಾನದ ಚುನಾವಣೆ ಸೇಡಿನಿಂದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

Related Articles

ವಿಷಪ್ರಾಶನದಿಂದ ಗಂಭೀರ ಸ್ಥಿತಿ ತಲುಪಿರುವ ಇಬ್ಬರನ್ನೂ ಮಾನಸ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Home add -Advt

Related Articles

Back to top button