Belagavi NewsBelgaum NewsKannada NewsKarnataka NewsLatestNational

*ಅಮೃತ್ ಭಾರತ್ ಸ್ಟೇಷನ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ; ಗೋಕಾಕ್ ಸೇರಿದಂತೆ ರಾಜ್ಯದ 13 ರೈಲು ನಿಲ್ದಾಣ ಮೇಲ್ದರ್ಜೆಗೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ನವದೆಹಲಿಯಲ್ಲಿ ವಿಡಿಯೋಕಾನ್ಫರೆನ್ಸ್ ಮೂಲಕ ಅಮೃತ್ ಭಾರತ್ ಸ್ಟೇಷನ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಈ ಯೋಜನೆಗೆ ರಾಜ್ಯದ 13 ರೈಲು ನಿಲ್ದಾಣಗಳನ್ನು ಆಯ್ಕೆ ಮಾಡಲಾಗಿದೆ.

ಹಾಸನದ ಅರಸಿಕೆರೆ, ಬೆಳಗಾವಿಯ ಗೋಕಾಕ್, ಕಲಬುರ್ಗಿ, ಕೊಪ್ಪಳ, ಧಾರವಾಡ, ಬಳ್ಳಾರಿ, ಹರಿಹರ, ಮೈಸೂರು, ಮಂಗಳೂರು ಸೇರಿದಂತೆ ರಾಜ್ಯದ 13 ರೈಲು ನಿಲ್ದಾಣಗಳನ್ನು ಈ ಯೋಜನೆಯಡಿ ಮೇಲ್ದರ್ಜೆಗೇರಿಸಲಾಗುತ್ತದೆ.

ಒಟ್ಟು 24 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ದೇಶಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ದಿಪಡಿಸಲಾಗುತ್ತಿದೆ. ರೈಲ್ವೆ ನಿಲ್ದಾಣಕ್ಕೆ ಉತ್ತಮ ವಿನ್ಯಾಸ, ಆಧುನಿಕ ಸೌಲಭ್ಯ, ಪರಂಪರೆ, ವಾಸ್ತುಶಿಲ್ಪ, ಸಂಸ್ಕೃತಿ ಪ್ರೇರಿತವಾದ ವಿನ್ಯಾಸವನ್ನು ಕಲ್ಪಿಸಲಾಗುತ್ತಿದೆ. ಈ ಮೂಲಕ ವಿಶ್ವದರ್ಜೆ ಸವಲತ್ತುಗಳನ್ನು ರೈಲು ನಿಲ್ದಾಣ ಕಲ್ಪಿಸುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗುತ್ತಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button