Kannada NewsKarnataka NewsLatest

*ಕ್ರಾಂತಿಕಾರಿ ಕವಿ, ಜನಪದ ಗಾಯಕ ಗದ್ದರ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಕ್ರಾಂತಿಕಾರಿ ಕವಿ, ಜನಪದ ಗಾಯಕ ಗದ್ದರ್ ಹೈದರಾಬಾದ್ ನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಾಯಕ ಗದ್ದರ್, ಹೈದರಾಬಾದ್ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಹಾಡುಗಳ ಮೂಲಕವೇ ಚಳುವಳಿ ಹುಟ್ಟುಹಾಕಿದ್ದ ಗಾಯಕ, ಸಾಮಾಜಿಕ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಪ್ರಜಾ ಯುದ್ಧ ನೌಕೆ ಎಂದೇ ಹೆಸರಾಗಿದ್ದರು. ತೆಲಂಗಾಣ ಹೋರಾಟದಲ್ಲಿಯೂ ಗುರುತಿಸಿಕೊಂಡಿದ್ದರು. ತೆಲಂಗಾಣ ಮಾತ್ರವಲ್ಲದೇ ದೇಶದ ವಿವಿಧ ರಾಜ್ಯಗಳಿಗೆ ತೆರಳಿ ಹಾಡು ಹಾಡಿ, ನಾಟಕಗನನ್ನು ಮಾಡಿ ಗಮನ ಸೆಳೆಯುತ್ತಿದ್ದರು.

ಆಂಧ್ರಪ್ರದೇಶದ ಮೆದರ್ ಜಿಲ್ಲೆಯ ತೂಪರಾನ ಗ್ರಾಮದಲ್ಲಿ 1949ರಲ್ಲಿ ಜನಿಸಿದ್ದ ಗದ್ದರ್ ಅವರ ಮೂಲ ಹೆಸರು ಗುಮ್ಮಡಿ ವಿಠಲ್ ರಾವ್. ಬಡತನದಲ್ಲಿಯೇ ಬಾಲ್ಯಗಳನ್ನು ಕಳೆದ ಗದ್ದರ್ ನಿಜಾಮಾಬಾದ್ ನಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಮುಗಿಸಿ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿದ್ದರು. ಅದರ ಜೊತೆಗೆ ಹಾಡುಗಳನ್ನು ಕಟ್ಟಿ ಹಾಡುತ್ತಾ, ತೆಲುಗಿನ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದರು. ಬಳಿಕ ಬ್ಯಾಂಕ್ ಉದ್ಯೋಗಕ್ಕೆ ರಾಜಿನಾಮೆ ನೀಡಿ ತಮ್ಮನ್ನು ಸಂಪೂರ್ಣವಾಗಿ ಸಾಮಾಜಿಕ ಹೋರಾಟದಲ್ಲಿ ತೊಡಗಿಸಿಕೊಂಡರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button