ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದು, ಪೊಲೀಸರು ಬಂಧಿಸಿದ್ದಾರೆ.
ವಿವಿಧ ಕಾಮಗಾರಿಗಳ ದುರ್ಬಳಕೆ, ನಕಲಿ ದಾಖಲೆ ಸೃಷ್ಟಿಸಿ 7 ಕೋಟಿ ಲೂಟಿ, ಬೇನಾಮಿ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ನುಂಗಿರುವ ಆರೋಪ ಸೇರಿದಂತೆ ಮೂಡಲಗಿರಿಯಪ್ಪ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದು, ಚಿತ್ರದುರ್ಗ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸತ್ಯನಾರಾಯಣರಾವ್ ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿದ್ದರು. ಬಳಿಕ ಚಿತ್ರದುರ್ಗದ ಸಿಇಎನ್ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು. ಇದೀಗ ಮೂಡಲಗಿರಿಯಪ್ಪನನ್ನು ಬಂಧಿಸಿ ವಿಚರಣೆ ನಡೆಸಿದ್ದಾರೆ.
ನಿರ್ಮಿತಿ ಕೇಂದ್ರದ ಹಣ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಂಗಳ ಹಿಂದಷ್ಟೇ ಮೂಡಲಗಿರಿಯಪ್ಪ ಕೆಲಸಿದಿಂದ ವಜಾಗೊಂಡಿದ್ದರು. ಇದೀಗ ಪೊಲೀಸರು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ