ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಟ್ವೀಟ್ ಮಾಡಿದ್ದಾರೆ. ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್, ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು. ಹೆಣ್ಣುಮಕ್ಕಳ ವಿಷಯವಾಗಿರುವುದರಿಂದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿರುವುದರಿಂದ ಸರಕಾರ ಮೊದಲಿಂದಲೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ತನಿಖೆ ಇನ್ನಷ್ಟು ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಲಿ ಎನ್ನುವ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ