ಬೆಳಗಾವಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮತ್ತಷ್ಟು ಹಣ: ಸಚಿವ ಸಂಪುಟ ತೀರ್ಮಾನ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹೆಚ್ಚಿನ ಹಣ ನೀಡಲು ಸಚಿವಸಂಪುಟ ಸಭೆ ತೀರ್ಮಾನಿಸಿದೆ.
ಸಂಪುಟ ಸಭೆಯ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. 140 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು. ಈಗ ಇನ್ನೂ 37 ಕೋಟಿ ರೂ ಹೆಚ್ಚು ಒದಗಿಸಿ, ಒಟ್ಟೂ ವೆಚ್ಚವನ್ನು 187 ಕೋಟಿ ರೂ. ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಹೆಸರನ್ನು ಬದಲಾಯಿಸಿ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ ಎಂದು ಇಡಲು ತೀರ್ಮಾನಿಸಲಾಗಿದ್ದು, ಕೆಲವು ತಾಲೂಕು, ಪ್ರದೇಶಗಳನ್ನು ಹೆಚ್ಚುವರಿ ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ.
ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎನ್.ಹಳ್ಳಿಗುಡಿ ಅವರ ವಿರುದ್ಧದ ಫೋಕ್ಸೋ ಪ್ರಕರಣ ಸಾಭೀತಾಗಿದ್ದರಿಂದ ಕೆಲಸದಿಂದ ವಜಾ ಮಾಡಲು ಸಂಪುಟ ಸಭೆ ತೀರ್ಮಾನಿಸಿದೆ.
5 ಸಿಟಿ ಸ್ಕ್ಯಾನ್ ಆಸ್ಪತ್ರೆ ಮತ್ತು ಚಿಕ್ಕೋಡಿ ಸೇರಿದಂತೆ 15 ಎಂಆರ್ ಐ ಸೆಂಟರ್ ಗಳನ್ನು ಪಿಪಿಪಿ ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು.
ಮೇಕೆ ದಾಟು ಯೋಜನೆ ಸಂಬಂಧಿಸಿದ 9 ಕ್ರಿಮಿನಲ್ ಪ್ರಕರಣ ಹಿಂದಕ್ಕೆ ಪಡೆಯಲು ತೀರ್ಮಾನಿಸಲಾಗಿದೆ.
391 ಕೋಟಿ ರೂ. ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಬೆಂಗಳೂರು ವಿಟಿಯು ಕೇಂದ್ರದ ಆವರಣದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಎರೋಸ್ಪೇಸ್ ಆಂಡ್ ಡಿಫೆನ್ಸ್ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಕರ್ನಾಟಕ ಸೈಬರ್ ಭದ್ರತಾ ನೀತಿಗೆ ಸಂಪುಟ ಒಪ್ಪಿಗೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ