
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನ ಮಾಜಿ ನ್ಯಾಯಾಧೀಶ ಸುಧೀರ್ ಪರ್ಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಪರ್ಮಾರ್ ವಿರುದ್ಧ ಹರ್ಯಾಣ ಭ್ರಷ್ಟಾಚಾರ ವಿರೋಧಿ ಬ್ಯೂರೋ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಇಡಿ ನಡೆಸುತ್ತಿದೆ. ಹೆಚ್ಚುವರಿ ನ್ಯಾಯಾಧೀಶ ಶ್ರೇಣಿಯ ನ್ಯಾಯಾಂಗ ಅಧಿಕಾರಿಯಾಗಿದ್ದ ಪರ್ಮಾರ್ ಅವರನ್ನು ಅಮಾನತುಗೊಳಿಸಲಾಗಿತ್ತು. ಅವರು ಮಾನತುಗೊಳ್ಳುವ ಮೊದಲು ವಿಶೇಷ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್-ಪಿಎಂಎಲ್ ಎ ನ್ಯಾಯಾಲಯ ಉಸ್ತುವಾರಿ ಸಹ ಆಗಿದ್ದರು.
ಪರ್ಮಾರ್ ಅವರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಸುಧೀರ್ ಪರ್ಮಾರ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ