Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 15ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

Home add -Advt

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಮಂಡ್ಯ, ಮೈಸೂರು, ರಾಮನಗರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಹಾಗು ನಾಳೆ ಮಳೆಯಾಗಲಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ಹಾವೇರಿ, ಗದಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button