Kannada NewsKarnataka NewsLatest

*ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಪುನೀತ್ ಕೆರೆಹಳ್ಳಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

2013ರಿಂದ 2023ರವರೆಗೆ ಒಟ್ಟು ಹತ್ತು ಪ್ರಕರಣಗಳಲ್ಲಿ ಪುನೀತ್ ಕೆರೆಹಳ್ಳಿ ಭಾಗಿಯಾಗಿದ್ದು, ಸಮಾಜದಲ್ಲಿ ಶಾಂತಿ ಕದಡುವ ಯತ್ನ, ಸಮಾಜವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಪೊಲಿಸರು ಬಂಧಿಸಿದ್ದಾರೆ.

ಪುನೀತ್ ಕೆರೆಹಳ್ಳಿ ವಿರುದ್ಧ, ಡಿ.ಜೆ.ಹಳ್ಳಿ, ಬೇಗೂರು, ಕಗ್ಗಲೀಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ,ಮಳವಳ್ಳಿ, ಸಾತನೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button