Kannada NewsKarnataka NewsLatest

*ಭೀಕರ ಅಪಘಾತ; ಪ್ರವಾಸಕ್ಕೆ ತೆರಳುತ್ತಿದ್ದ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಸಂಗನಬಸಪ್ಪ(36), ರೇಖಾ(29), ಭೀಮಾಶಂಕರ ಹಾಗೂ ಅಗಸ್ತ್ಯ(8), ಮಧುಸೂಧನ್ (26) ಎಂದು ಗುರುತಿಸಲಾಗಿದೆ. ಮೃತರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನವರು ಎಂದು ತಿಳಿದುಬಂದಿದೆ.

Home add -Advt

ವಿಜಯಪುರದಿಂದ ಚಿಕ್ಕಮಗಳೂರಿಗೆ ಕುಟುಂಬ ಸಮೇತರಾಗಿ ಎರಡು ವಾಹನಗಳಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಮಕಕ್ಳ ಸ್ಥಿತಿ ಗಂಭೀರವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Related Articles

Back to top button