ಡಾ.ಪ್ರಭಾಕರ ಕೋರೆಯವರ ಜನ್ಮ ದಿನ ನಿಮಿತ್ತ ಚೆಸ್ ಸ್ಪರ್ಧೆ
ಪ್ರಗತಿವಾಹಿನಿ ಸುದ್ದಿ – ಬೆಳಗಾವಿ : ಚಿಕ್ಕೋಡಿಯ ಕೆ.ಎಲ್.ಇ ಇಂಜೀನಿಯರಿಂಗ್ ಕಾಲೇಜಿನಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರ 72ನೇಯ ಜನ್ಮ ದಿನದ ನಿಮಿತ್ತವಾಗಿ ಚೆಸ್ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಪ್ರಸಾದ ರಾಂಪೂರೆ, ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರ 72ನೇಯ ಜನ್ಮ ದಿನದ ಅಂಗವಾಗಿ ನಮ್ಮ ಮಹಾವಿದ್ಯಾಲಯದಲ್ಲಿ ಚೆಸ್ ಸ್ಪರ್ಧೆ ಹಮ್ಮಿಕೊಂಡಿದ್ದೇವೆ, ಈ ಚದುರಂಗ ಆಟದಲ್ಲಿ ಪಾಲ್ಗೊಳ್ಳುವದರಿಂದ ನಮ್ಮ ಮಾನಸಿಕ ಸಾಮರ್ಥ್ಯ ಮತ್ತು ಬುದ್ದಿಶಕ್ತಿ ಹೆಚ್ಚುತ್ತದೆ ಎಂದರು.
ಈ ಸ್ಪರ್ಧೆಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕು. ಪ್ರಥ್ವಿರಾಜ ಮಿರ್ಜಿ ಹಾಗೂ ದ್ವಿತೀಯ ಸ್ಥಾನವನ್ನು ಕು. ಜಿಯಾ ಮಕಾಂದಾರ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕು. ನಂದಿನಿ ಮಾಳಿ ಹಾಗೂ ದ್ವಿತೀಯ ಸ್ಥಾನವನ್ನು ಕು. ಪ್ರೀತಿ ನೇಜಕರ ಪಡೆದುಕೊಂಡಿದ್ದಾರೆ.
ಈ ಸ್ಪರ್ಧೆಯ ಪ್ರೌಢ ಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕು. ಸೌಮೀಲ ಶಾನ ಹಾಗೂ ದ್ವಿತೀಯ ಸ್ಥಾನವನ್ನು ಕು. ಸಮೃಧ್ಧ ಶೆಟ್ಟಿ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕು. ಪೂನಮ ಕೊಡಟ್ಟಿ ಹಾಗೂ ದ್ವಿತೀಯ ಸ್ಥಾನವನ್ನು ಕು. ಮಾನಸಿ ಹಡಕರ ಪಡೆದುಕೊಂಡಿದ್ದಾರೆ.
ಈ ಸ್ಪರ್ಧೆಯ ಕಾಲೇಜು ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕು. ಪವನ ನಾಯಕ ಹಾಗೂ ದ್ವಿತೀಯ ಸ್ಥಾನವನ್ನು ಕು. ಭರ್ಮೆಶ ಸಂಕೇಶ್ವರ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕು. ಮಾನಸಿ ಬಾಬರ ಹಾಗೂ ದ್ವಿತೀಯ ಸ್ಥಾನವನ್ನು ಕು. ದೀಪಾಲಿ ಪಾಟೀಲ ಪಡೆದುಕೊಂಡಿದ್ದಾರೆ.
ಈ ಸ್ಪರ್ಧೆಯಲ್ಲಿ ಚಿಕ್ಕೋಡಿ, ನಿಪ್ಪಾಣೆ, ಅಂಕಲಿ, ಅಥಣಿ, ಕಾಗವಾಡ, ರಾಯಬಾಗ ಪಟ್ಟಣಗಳ 30 ಶಾಲಾ-ಕಾಲೇಜುಗಳ 250 ಕ್ಕಿಂತ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದರು. ಪ್ರೊ. ಗಜಾನನ ದೆಸ್ತೋಟ ಸ್ವಾಗತಿಸಿದರು. ಪ್ರೊ. ಮನೋಜ ನಾಂದಣಿ ವಂದಿಸಿದರು.
ದೈಹಿಕ ನಿರ್ದೆಶಕರಾದ ಸಂಜೀವ ದರೂರ ಸಂಯೋಜಿಸಿದರು./////
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ