Kannada NewsKarnataka NewsLatest
*ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ. ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ, ಬಾಗಲಕೋಟೆ, ಕಲಬುರ್ಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ,ದಾವಣಗೆರೆ, ಶಿವಮೊಗ್ಗ, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ಮುಂಗಾರು ದುರ್ಬಲವಾಗಿರುವ ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



