ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಿಬಿಎಂಪಿ ಅಧಿಕಾರಿ ಮಹದೇವ್ ನೀಡಿದ ದೂರಿನ ಹಿನ್ನೆಲೆಯಲ್ಲಿ 57 ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಬಿಎಂಪಿ ಅಧಿಕಾರಿ ಮಹದೇವ್ ಎಂಬುವವರು, ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಮಂಜುನಾಥ್ ಸೇರಿದಂತೆ 57 ಗುತ್ತಿಗೆದಾರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪ್ರಕರಣ ಸಂಬಂಧ 22 ಗುತ್ತಿಗೆದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಕಳೆದ ಮೂರು ವರ್ಷಗಳಿದ ಬಾಕಿ ಬಿಲ್ ಪಾವತಿಯಾಗಿಲ್ಲ, ಬಿಲ್ ಕ್ಲೀಯರ್ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿ ಗುತ್ತಿಗೆದಾರರು ಒತ್ತಡ ಹೇರುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ