Kannada NewsKarnataka NewsLatest

*ಶಾಲೆಯಲ್ಲಿ ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿನಿ ಅಪಹರಣಕ್ಕೆ ದುಷ್ಕರ್ಮಿ ಯತ್ನ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಶೌಚಾಲಯಕ್ಕೆ ಹೋಗಿದ್ದ 2ನೇ ತರಗತಿ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.

ವಿದ್ಯಾರ್ಥಿನಿ ಶಾಲೆಯಲ್ಲಿ ಶೌಚಾಲಯಕ್ಕೆ ತೆರಳಿದ್ದಳು. ಈ ವೇಳೆ ಅಪರಿಚಿತ ವ್ಯಕ್ತಿ ಬಾಲಕಿ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಜೋರಾಗಿ ಕಿರುಚಿಕೊಂಡಿದ್ದಾಳೆ. ವಿದ್ಯಾರ್ಥಿನಿಯನ್ನು ಅಲ್ಲೇ ಬಿಟ್ಟು ದುಷ್ಕರ್ಮಿ ಪರಾರಿಯಾಗಿದ್ದಾನೆ. ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Home add -Advt

ಅಷ್ಟರಲ್ಲಿ ಶಾಲೆಯ ಇತರ ವಿದ್ಯಾರ್ಥಿಗಳು, ಶಿಕ್ಷಕರು ಧಾವಿಸಿ ಬಂದಿದ್ದಾರೆ. ಘಟನೆ ಸಂಬಂಧ ಶಾಲೆಯ ಮುಖ್ಯಶಿಕ್ಷಕರು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


Related Articles

Back to top button