Kannada NewsLatestNational
ಟಿಕೆಟ್ ಇಲ್ಲದೆ ಪ್ರಯಾಣಿಸಿ ರೈಲ್ವೆ ಟಿಟಿಇಗಳ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳು
ಪ್ರಗತಿವಾಹಿನಿ ಸುದ್ದಿ, ಲಕ್ನೋ: ಉತ್ತರ ಪ್ರದೇಶದ ಫತೇಪುರ್‌ನಲ್ಲಿ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಲ್ಲದೆ ಟಿಕೆಟ್ ಕೇಳಿದ ಟಿಕೆಟ್ ಪರೀಕ್ಷಕರ (ಟಿಟಿಇ) ಮೇಲೆ ನಾಲ್ವರು ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ.
ಬಿಕಾನೇರ್-ಪ್ರಯಾಗರಾಜ್ ಎಕ್ಸ್‌ಪ್ರೆಸ್‌ನ ಎಸಿ ಕೋಚ್‌ನಲ್ಲಿ ಈ ಪೊಲೀಸ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟಿಕೆಟ್ ಚೆಕಿಂಗ್ ಗೆ ಆಗಮಿಸಿದ ಮೂವರು ಟಿಟಿಇಗಳು ಟಿಕೆಟ್‌ಗಳನ್ನು ತೋರಿಸುವಂತೆ ಹೇಳಿದಾಗ ನಾಲ್ವರೂ ಅಧಿಕಾರಿಗಳು ಅವರನ್ನು ನಿಂದಿಸಿದ್ದಲ್ಲದೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಟಿಟಿಇಗಳು ದೂರಿದ್ದಾರೆ.
ರೈಲ್ವೇ ಪೊಲೀಸರು (ಜಿಆರ್‌ಪಿ) ಆರೋಪಿತರನ್ನು ಪತ್ತೆ ಹಚ್ಚಿದ್ದು ಈ ಕುರಿತು ತನಿಖೆ ಮುಂದುವರಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ