ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಬೇಡಿಕೆ ಆರೋಪ; ಇಬ್ಬರು ಕೃಷಿ ಅಧಿಕಾರಿಗಳ ಬಂಧನ
ಪ್ರಗತಿವಾಹಿನಿ ಸುದ್ದಿ, ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿ ನಕಲಿ ಪತ್ರ ಸೃಷ್ಟಿಸಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಕೆ.ಆರ್.ಪೇಟೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುಪ್ರಸಾದ್ ಹಾಗೂ ಕೃಷಿ ಅಧಿಕಾರಿ ಸುದರ್ಶನ್ ಬಂಧಿತರು. ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 3 ದಿನ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಮ್ಮ ಬಳಿ 6 ರಿಂದ 8 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಪತ್ರದಲ್ಲಿ ಎಚ್ಚರಿಸಿದ್ದರು.
ರಾಜ್ಯಪಾಲರ ಸೂಚನೆ ಮೇರೆಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಈ ಕುರಿತ ತನಿಖೆಗೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆ ಕೈಗೊಂಡ ಸಿಐಡಿ ತಂಡ ಸದ್ಯ ಇಬ್ಬರನ್ನು ಬಂಧಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ