Kannada NewsKarnataka NewsLatest

ಮಹಿಳೆ ಸ್ನಾನದ ದೃಶ್ಯ ವಿಡಿಯೊ ಮಾಡಿದ ಮನೆ ಮಾಲೀಕನ ವಿರುದ್ಧ FIR

ಪ್ರಗತಿವಾಹಿನಿ ಸುದ್ದಿ, ರಾಮನಗರ : ಜಿಲ್ಲೆಯ ಕನಕಪುರ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ಸ್ನಾನ ಮಾಡುವಾಗ ಮನೆ ಮಾಲೀಕ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾನೆ.

ಮಹಿಳೆ ಬಾಥ್ ರೂಂನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ತನ್ನ ಮೊಬೈಲ್ ನಲ್ಲಿ ದೃಶ್ಯ ಚಿತ್ರೀಕರಿಸಿಕೊಂಡ ಮನೆ ಮಾಲೀಕ ಧನರಾಜ್ ಅದನ್ನು ತನ್ನ ವಾಟ್ಸಾಪ್ ನಲ್ಲಿ ಶೇರ್ ಮಾಡಿದ್ದ.

ಈ ಮಧ್ಯೆ ಜಾಲತಾಣಗಳಲ್ಲಿ ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮಹಿಳೆ ಕನಕಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಧನರಾಜನನ್ನು ತನಿಖೆಗೆ ಒಳಪಡಿಸಲಾಗಿದೆ.

Home add -Advt

Related Articles

Back to top button