Kannada NewsKarnataka NewsLatest
*ಚಂದ್ರಯಾನ-3 ಯಶಸ್ವಿ ದಿನ ಇನ್ಮುಂದೆ ’ರಾಷ್ಟ್ರೀಯ ಬಾಹ್ಯಾಕಾಶ ದಿನ’; ಪ್ರಧಾನಿ ಮೋದಿ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರತದ ಹೆಮ್ಮೆ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಚಂದ್ರಯಾನ ಯಶಸ್ವಿಯಾದ ದಿನವನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಘೋಷಿಸಿದ್ದಾರೆ.
ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ಅಧ್ಯಕ್ಷ ಸೋಮನಾಥ್ ಹಾಗೂ ಎಲ್ಲ ವಿಜ್ಞಾನಿಗಳು, ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದರು.
ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ದ್ರುವದಲ್ಲಿ ಲ್ಯಾಂಡ್ ಆದ ಆಗಸ್ಟ್ 23ರ ದಿನವನ್ನು ಇನ್ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಆಚರಿಸಲಾಗುವುದು ಎಂದು ಘೋಷಿಸಿದರು. ಚಂದ್ರಯಾನದ ಯಶಸ್ಸಿಗೆ ಇಸ್ರೋ ವಿಜ್ಞಾನಿಗಳನ್ನು ಕೊಂಡಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ