Latest

ನೂತನಪಿಂಚಣಿ ಯೋಜನೆ-ಸಮಿತಿ ರಚನೆ

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

1-4-2006ರ ನಂತರ ನೇಮಕಗೊಂಡಿರುವ ಸರಕಾರಿ ನೌಕರರಿಗೆ  ಇರುವ ಎನ್ ಪಿಎಸ್ ಯೋಜನೆ ರದ್ಧುಪಡಿಸಿ ಹಳೆಯ ಪಿಂಚಣಿಯನ್ನೇ ಮುಂದುವರಿಸುವ ಕುರಿತಂತೆ ಸಲ್ಲಿಸಲಾಗಿರುವ ಮನವಿಗಳ ಪರಿಶೀಲನೆ ನಡೆಸಲು ಸಮಿತಿ ರಚಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

ಸರಕಾರದ ಅಪರ ಮುಖ್ಯಕಾರ್ಯದರ್ಶಿ ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಆಡಳಿತ ಸುಧಾರಣೆ ಅಪರಮುಖ್ಯ ಕಾರ್ಯದರ್ಶಿ, ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ, ಆರ್ಥಿಕ ಇಲಾಖೆ ಕಾರ್ಯದರ್ಶಿ, ಆರ್ಥಿಕ ಇಲಾಖೆ ಜಂಟಿ ಕಾರ್ಯದರ್ಶಿ ಸದಸ್ಯರಾಗಿರುತ್ತಾರೆ.

ಈ ಸಮಿತಿ ಸರಕಾರಿ ನೌಕರರು ನೀಡಿರುವ ಮನವಿಗಳನ್ನು ಪರಿಶೀಲಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದರೆ ಸಮಿತಿಯ ಕಾಲಾವಧಿಯಾಗಲಿ, ನಿರ್ಧಿಷ್ಟ ಉದ್ಧೇಶವಾಗಲಿ ಯಾವುದೂ ಆದೇಶದಲ್ಲಿಲ್ಲ. ಇದೊಂದು ಕೇವಲ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಮಾಡಿರುವ ಸಮಿತಿ ಎಂದು ಎನ್ ಪಿಎಸ್ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button