Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಳಗಾವಿ, ಬೀದರ್, ಬಗಲಕೋಟೆ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ತುಮಕೂರು, ಕೋಲಾರ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿಯೂ ಸಾಧರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button