Kannada NewsKarnataka NewsLatestPolitics

*ಗೃಹಲಕ್ಷ್ಮೀ ಯೋಜನೆ; ಸಾಂಕೇತಿಕವಾಗಿ 10 ಮಹಿಳೆಯರಿಗೆ ಡಿಜಿಟಲ್ ಕಾರ್ಡ್ ವಿತರಣೆ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

Home add -Advt

ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಜಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಿದರು. ಈ ವೇಳೆ ಮುಖ್ಯಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು, ಶಾಸಕರು, ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

ಇದೇ ವೇಳೆ ಸಾಂಕೇತಿಕವಾಗಿ ಹತ್ತು ಮಹಿಳೆಯರಿಗೆ ಡಿಜಿಟಲ್ ಕಾರ್ಡ್ ವಿತರಣೆ ಮಾಡಲಾಯಿತು. ಈ ಮೂಲಕ ಮನೆ ಯಜಮಾನಿಯರ ಖಾತೆಗೆ ಇಂದೇ 2000 ರೂಪಾಯಿ ಹಣ ವರ್ಗಾವಣೆಯಾದಂತಾಗಿದೆ.

Related Articles

Back to top button