Kannada NewsKarnataka NewsLatest

*ಬಸ್ ನಿಂದ ಬಿದ್ದು ಕಂಡಕ್ಟರ್ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವೇಗವಾಗಿ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಬಸ್ ಕಂಡಕ್ಟರ್ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರು ನಗರದ ನಂತೂರು ವೃತ್ತದಲ್ಲಿ ನಡೆದಿದೆ.

ಈರಯ್ಯ (23) ಮೃತ ಕಂಡಕ್ಟರ್. ಬಾಗಲಕೋಟೆ ಮೂಲದ ಈರಯ್ಯ ಸುರತ್ಕಲ್ ನ ತಡಂಬೈಲ್ ನಲ್ಲಿ ವಾಸವಾಗಿದ್ದರು. ಸುರತ್ಕಲ್ ನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಬಸ್ ನ ಮುಂಗಾದ ಬಾಗಿಲಿನಲ್ಲಿ ಫುಟ್ ಬೋರ್ಡ್ ಮೇಲೆ ನಿಂತಿದ್ದ ಕಂಡಕ್ಟರ್, ನಂತೂರು ವೃತ್ತದಲ್ಲಿ ಬಸ್ ಟರ್ನಿಂಗ್ ಮಾಡುತ್ತಿದ್ದ ರಭಸಕ್ಕೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳ ಕಣ್ಣೆದುರೇ ಈ ದುರಂತ ಸಂಭವಿಸಿದೆ. ತಕ್ಷಣ ಪೊಲಿಸರು ಕಂಡಕ್ಟರ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕದ್ರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button