Kannada NewsKarnataka NewsLatest

*BBMP ಕಚೇರಿಯಲ್ಲಿ ಬೆಂಕಿ ದುರಂತ ಪ್ರಕರಣ; ಮುಖ್ಯ ಇಂಜಿನಿಯರ್ ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗೆ ಬಿಬಿಎಂಪಿ ಕಚೇರಿಯಲ್ಲಿ ಸಂಭವಿಸಿದ್ದ ಬೆಂಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಆಗಸ್ಟ್ 11ರಂದು ಬಿಬಿಎಂಪಿಯ ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ವೇಳೆ 10 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಸ್ಥಿತಿ ಗಂಭೀರವಾಗಿದ್ದು, ಗಾಯಾಳು ಶಿವಕುಮಾರ್ ಅವರನ್ನು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದ ಮೂರು ದಿನಗಳಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರಿಗೆ ಐಸಿಯುನಲ್ಲಿ ಕೃತಕ ಉಸಿರಾಟದ ವ್ಯವಶೆ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಚಿಕಿತ್ಸೆ ಫಲಿಸದೇ ಮುಖ್ಯ ಇಂಜಿನಿಯರ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button