Kannada NewsKarnataka NewsLatest

*ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ರೈತರಿಗೆ ಕೊಂಚ ನೆಮ್ಮದಿ ಸುದ್ದಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜ್ಯದ ಜನತೆ, ರೈತರಿಗೆ ಕೊಂಚ ನೆಮ್ಮದಿ ಸುದ್ದಿ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೆ.6ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆ ರಾರಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಇಂದು ಕೂಡ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯಪುರ, ಯಾದಗಿರಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು,ಕೊಡಗು, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನು ರಾಜ್ಯದಲ್ಲಿ ವಾಡಿಕೆಗಿಂತ ಉಷ್ಣಾಂಶ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Related Articles

Back to top button