ಪ್ರಗತಿವಾಹಿನಿ ಸುದ್ದಿ; ಮುಂಬೈ: ಕೆನರಾ ಬ್ಯಾಂಕ್ ಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಬಂಧಿಸಿದ್ದಾರೆ.
ಕೆನರಾ ಬ್ಯಾಂಕ್ ಗೆ 538 ಕೋಟಿ ರೂಪಾಯಿ ವಂಚನೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ನರೇಶ್ ಗೋಯಲ್ ರನ್ನು ಬಂಧಿಸಿ ವಿಚರಣೆ ನಡೆಸಿದೆ. ನರೇಶ್ ಅವರನ್ನು ಸತತ 7 ಗಂಟೆಯ ಕಾಲ ವಿಚಾರಣೆ ಬಳಿಕ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
74 ವರ್ಷದ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್, ಕೆನರಾ ಬ್ಯಾಂಕ್ ನಿಂದ ಸಾಲ ಪಡೆದು ಸಂಪೂರ್ಣ ಮರು ಪಾವತಿ ಮಾಡಿಲ್ಲದ ಕಾರಣಕ್ಕೆ ಮೇ 3ರಂದು ಸಿಬಿಐ ವಂಚನೆ ಪ್ರಕರಣ ದಾಖಲಿಸಿತ್ತು. ಇದೇ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರನ ಸಂಬಂಧ ಇಡಿ ಅಧಿಕಾರಿಗಳು ನರೇಶ್ ಗೋಯಲ್ ಗೆ ಸೇರಿದ ಮುಂಬೈ, ದೆಹಲಿಯಲ್ಲಿ ದಾಳಿ ನಡೆಸಿದ್ದರು. ಇದೀಗ ನರೇಶ್ ಗೋಯಲ್ ಅವರನ್ನು ಬಂಧಿಸಿ ವಿಚರಣೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ