ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಸಿಲ ಝಳ, ಮಳೆ ಕೊರತೆಯಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಮಳೆ ರಾಯ ಕೊಂಚ ತಂಪೆರೆದಿದ್ದಾನೆ. ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸೆ.1ರಂದು ಸುರಿದ ಮಳೆ ಈ ವರ್ಷದ ಅತ್ಯಂತ ದೊಡ್ಡ ವರುಣಾರ್ಭಟವಾಗಿದೆ. ಆಗಸ್ಟ್ 31ರ ಸಂಜೆಯಿಂದ ಸೆ.1ರ ಬೆಳಿಗ್ಗೆ 8:30ರವರೆಗೆ 136.5 ಮೀ.ಮೀ ಮಳೆಯಾಗಿದೆ ಎಂದು ಕರ್ನಾತಕ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಮಾಹಿತಿ ನೀಡಿದೆ.
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ.
ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಒಟ್ಟಾರೆ ಮುಂದಿನ 24 ಗಂಟೆಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ