Belagavi NewsBelgaum NewsKannada NewsKarnataka NewsLatestUncategorized

ಬೆಳಗಾವಿ – ಮೈಸೂರು ಮಧ್ಯೆ ರೈಲು ಸೇವೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಎಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರೈಲು ಸಂಖ್ಯೆ ೧೭೩೦೨ ಬೆಳಗಾವಿಯಿಂದ ರಾತ್ರಿ ೦೭.೪೫ ಗಂಟೆಗೆ ಹೊರಟು ಮರುದಿನ ಮುಂಜಾನೆ ೦೭.೧೦ ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ ೧೭೩೦೧ ಮೈಸೂರಿನಿಂದ ರಾತ್ರಿ ೧೦.೩೦ ಗಂಟೆಗೆ ಹೊರಟು ಮರುದಿನ ಮುಂಜಾನೆ ೧೦.೪೫ ಗಂಟೆಗೆ ಬೆಳಗಾವಿಗೆ ತಲುಪಲಿದೆ.

ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಎಕ್ಸಪ್ರೆಸ್ ರೈಲು ತನ್ನ ಸಂಚಾರ ಆರಂಭಿಸಲಿದೆ ಎಂದರು.
ನನ್ನ ಮನವಿಗೆ ಸ್ಪಂದಿಸಿ ಬೆಳಗಾವಿ-ಮೈಸೂರು ಎಕ್ಸಪ್ರೆಸ್ ರೈಲು ಪ್ರಾರಂಭಿಸಲು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಬೆಳಗಾವಿಯಿಂದ ರೈಲು ಆರಂಭಿಸಲು ಅನುಮತಿ ನೀಡಿದ್ದಾರೆ ಎಂದು ಕಡಾಡಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button