ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ನಿಲುವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬೆಂಬಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, “ಎರಡು ಅಥವಾ ಅದಕ್ಕಿಂತ ಹೆಚ್ಚು ಶಕ್ತಿಗಳು ಸಂಘರ್ಷದಲ್ಲಿ ಸಿಲುಕಿದಾಗ, ಪಕ್ಷಗಳನ್ನು ಆಯ್ಕೆ ಮಾಡಲು ಇತರ ರಾಷ್ಟ್ರಗಳ ಮೇಲೆ ಅಪಾರವಾದ ಒತ್ತಡವಿರುತ್ತದೆ. ಈ ವಿಷಯದಲ್ಲಿ ಭಾರತ ಸರಿಯಾದ ನಿರ್ಣಯವನ್ನೇ ತೆಗೆದುಕೊಂಡಿದೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.
ಇದೇ ಸಮಯದಲ್ಲಿ ಅವರು ಶಾಂತಿಗಾಗಿ ಮನವಿ ಮಾಡಿದ್ದಾರೆ. “ಭದ್ರತಾ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸುವುದು G20ಗೆ ಮುಖ್ಯವಾಗಿದೆ” ಎಂದು ಸಹ ಅವರು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ