ಮಾಸ್ತಮರಡಿ ಗ್ರಾಮಸ್ಥರೊಂದಿಗೆ ಅಭಿವೃದ್ಧಿ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಚರ್ಚೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಕುಶಲೋಪರಿ ವಿಚಾರಿಸಿ, ಗ್ರಾಮದ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಇದೇ ಸಮಯದಲ್ಲಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ, ಆಶೀರ್ವಾದ ಪಡೆದರು.
ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನೂತನ ಸಮುದಾಯ ಭವನ ನಿರ್ಮಾಣದ ಸಲುವಾಗಿ ಅವರು ಈ ಸಂದರ್ಭದಲ್ಲಿ ಗ್ರಾಮಸ್ಥರ ಜತೆ ಮಾತುಕತೆ ನಡೆಸಿದರು.
ಗ್ರಾಮದ ಹಿರಿಯರು, ಯಲ್ಲಪ್ಪ ತೊರ್ಲೆ, ಬಸಲಿಂಗ ಮರಕಟ್ಟಿ, ಚಂದ್ರು ಜಾಂಗಳಿ, ವಿಕ್ರಂ ಜಾಂಗಳಿ, ಪ್ರಕಾಶ ಪಾಟೀಲ, ಸುರೇಶಗೌಡ ಪಾಟೀಲ, ಮಂಜುನಾಥ ಕೋಲಕಾರ, ರಾಘವೇಂದ್ರ ಮಾವಿನಕಟ್ಟಿ, ಶ್ರೀಶೈಲ್ ಗೌಡ ಪಾಟೀಲ, ನಾಗನಗೌಡ ಪಾಟೀಲ, ಬಾಳು ಕುರಂಗಿ, ವಿಠ್ಠಲ ತೋರ್ಲೆ, ಬಸವರಾಜ ತೋರ್ಲೆ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ