Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ ವಿರುದ್ಧ ನೇರಾನೇರ ಕಿಡಿ ಕಾರಿದ ಬಿ.ಕೆ.ಹರಿಪ್ರಸಾದ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ, ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ನೇರಾನೇರ ಕಿಡಿ ಕಾರಿದ್ದು, ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ಸಿದ್ದರಾಮಯ್ಯನವರಿಗೆ ಧನ್ಯವಾದ. ದೇವರಾಜ್ ಅರಸು ಅವರ ಕಾರಿನಲ್ಲಿ ಕುಳಿತರೆ ಸಾಲದು, ಅವರ ಚಿಂತನೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದ್ದಾರೆ.

ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಎಂದೂ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ, ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿದರೆ… ನಾನು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ… ನಾನು 3 ಬಾರಿ ಚುನಾವಣೆಯಲ್ಲಿ ಸೋತಿರಬಹುದು ಆದರೆ ಇನ್ನೂ ಸತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Back to top button