Kannada NewsLatestNational

ರಾಷ್ಟ್ರ ರಾಜಧಾನಿಯಲ್ಲಿ ತೆರೆ ಕಂಡ ಜಿ20 ಶೃಂಗಸಭೆ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ರಾಷ್ಟ್ರದ ರಾಜಧಾನಿಯಲ್ಲಿ ಆಯೋಜಿಸಿದ್ದ ಜಿ20 ಶೃಂಗಸಭೆ ಯಶಸ್ವಿಯಾಗಿ ಸಮಾರೋಪಗೊಂಡಿದೆ.

ಅಂತಿಮ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬ್ರೆಜಿಲ್‌ ಅಧ್ಯಕ್ಷ ಲುಲಾ ಡಿ’ ಸಿಲ್ವಾ ಅವರಿಗೆ ಹ್ಯಾಮರ್ ನೀಡುವ ಮೂಲಕ ಜಿ20 ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ಶೃಂಗಸಭೆಯಲ್ಲಿ ಹಲವು ಜಾಗತಿಕ ನಾಯಕರು ನಾನಾ ಪ್ರಮುಖ ನಿರ್ಧಾರಗಳನ್ನು ಘೋಷಿಸಿದ್ದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

“ಜಿ 20 ಬಣವನ್ನು ಸಮರ್ಥವಾಗಿ ಮುನ್ನಡೆಸಿದ್ದಕ್ಕಾಗಿ, ಶೃಂಗಸಭೆ ಅಚ್ಚುಕಟ್ಟಾಗಿ ನೆರವೇರಿಸಿದ್ದಕ್ಕೆ ಬ್ರೆಜಿಲ್ ಅಧ್ಯಕ್ಷರು ಪ್ರಧಾನಿ ಮೋದಿಯವರನ್ನು ಬ್ರೆಜಿಲ್ ಅಧ್ಯಕ್ಷರು ಅಭಿನಂದಿಸಿದರಲ್ಲದೆ ಹೊಸ ಆಶಯಗಳಿಗೆ ತಳಪಾಯ ಹಾಕಿದ್ದಕ್ಕಾಗಿ ಭಾರತವನ್ನು ಶ್ಲಾಘಿಸಿದರು.

2024ರ ಜಿ20 ಶೃಂಗಸಭೆ ಬ್ರೆಜಿಲ್‌ನಲ್ಲಿ ನಡೆಯಲಿದೆ. 2025 ರಲ್ಲಿ ದಕ್ಷಿಣ ಆಫ್ರಿಕಾ, 2026ರಲ್ಲಿ ಯುನೈಟೆಡ್ ಸ್ಟೇಟ್ಸ್ ಜಿ20 ಅಧ್ಯಕ್ಷತೆ ವಹಿಸಿಕೊಳ್ಳಲಿವೆ.

ಇಂದು ಬೆಳಗ್ಗೆ, ಪ್ರಧಾನಿ ಮೋದಿ ಜಿ 20 ನಾಯಕರು ಮತ್ತು ಇತರ ಅಂತಾರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದರು. ಯುನೈಟೆಡ್ ಕಿಂಗ್‌ಡಮ್ ಪ್ರಧಾನಿ ರಿಷಿ ಸುನಕ್, ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡೋ, ಕೊಮೊರೊಸ್ ಒಕ್ಕೂಟದ ಅಧ್ಯಕ್ಷ ಮತ್ತು ಆಫ್ರಿಕನ್ ಯೂನಿಯನ್ (ಎಯು) ಅಧ್ಯಕ್ಷ ಅಜಲಿ ಅಸ್ಸೌಮಾನಿ, ನೈಜೀರಿಯಾದ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು, ಸ್ಪೇನ್‌ನ ಉಪಾಧ್ಯಕ್ಷ ನಾಡಿಯಾ ಕ್ಯಾಲ್ವಿನೋ, ಯುನೈಟೆಡ್ ಮೆಕ್ಸಿಕನ್ ಸ್ಟೇಟ್ಸ್ ಆರ್ಥಿಕ ಸಚಿವ ರಾಕ್ವೆಲ್ ಬ್ಯೂನ್ರೊಸ್ಟ್ರೋ ಸ್ಯಾಂಚೆಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button