Kannada NewsKarnataka NewsLatest

*ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಘಿ ಕೇಸ್; 7000ಕ್ಕೂ ಅಧಿಕ ಪ್ರಕರಣಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ.

ಅತಿ ಹೆಚ್ಚು ಪ್ರಕರಣಗಳು ಬೆಂಗಳೂರು ನಗರದಲ್ಲಿಯೇ ಪತ್ತೆಯಾಗಿದೆ. 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ.

Home add -Advt

ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ.

ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Related Articles

Back to top button