*ಶ್ರಾವಣ ಮಾಸದ ಕೊನೆ ಸೋಮವಾರ: ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶ್ರಾವಣ ಮಾಸದ ಕೊನೆಯ ಸೋಮವಾರದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಿಂಡಲಗಾ ಗ್ರಾಮದ ಜಯನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆಯಲ್ಲಿ ಭಾಗಿಯಾಗಿ, ಮಲ್ಲಿಕಾರ್ಜುನ ಸ್ವಾಮಿಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿವತಿಯಿಂದ ಸಚಿವರನ್ನು ಸತ್ಕರಿಸಲಾಯಿತು.
ತುರಮುರಿಗೆ ಭೇಟಿ: ಕೊನೆಯ ಶ್ರಾವಣ ಸೋಮವಾರದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತುರಮುರಿ ಗ್ರಾಮದ ಶ್ರೀ ರಾಮಲಿಂಗ ದೇವಸ್ಥಾನಕ್ಕೆ ಭೇಟಿ ಕೊಟ್ಟು, ದರ್ಶನ ಆಶೀರ್ವಾದ ಪಡೆದರು.
ಈ ವೇಳೆ ಸ್ಥಳೀಯ ನಾಗರಿಕರು ಸಚಿವರನ್ನು ಸತ್ಕರಿಸಿದರು.
ಈ ವೇಳೆ ಗ್ರಾಮದ ಹಿರಿಯರು, ಯುವರಾಜ ಕದಂ, ರಘುನಾಥ್ ಖಂಡೇಕರ್, ಚಂದ್ರಕಾಂತ ಜಾಧವ್, ಮಾರುತಿ ಖಂಡೇಕರ್, ಮಲ್ಲಪ್ಪ ಟಂಗನ್ನಕರ್, ಪುಂಡಲೀಕ್ ಖಂಡೇಕರ್, ಸುಹಾಸ್ ಜಾಧವ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ