ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿದ್ದ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ನ್ನು ಹತ್ತು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ 6 ಆರೊಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಇಂದು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಆಲಯಕ್ಕೆ ಹಾಜರು ಪಡಿಸಿದರು.
ಆರೋಪಿಗಳಾದ ಚೈತ್ರಾ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಕೋರ್ಟ್ ನಲ್ಲಿ ಜಡ್ಜ್ ಮುಂದೆ ಹಾಜರು ಪಡಿಸಿದ ಪೊಲಿಸರು, ವಿಚಾರಣೆಗಾಗಿ ಆರೋಪಿಗಳನ್ನು 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಳಿದರು. ಈ ವೇಳೆ ಕೋರ್ಟ್ ಸೆ.23ರವರೆಗೆ ಆರೋಪಿಗಳನ್ನು ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ.
ಆರೋಪಿ ಗಗನ್ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ