Kannada NewsKarnataka NewsLatestPolitics
*ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಮಹತ್ವದ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಭಾಂಗಣ ಕೊಠಡಿಯಲ್ಲಿ ಸತತ ಎರಡನೇ ದಿನವೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಕೆಲ ಮಹತ್ವದ ಸೂಚನೆಗಳನ್ನು ನೀಡಲಾಯಿತು.
DC ಮತ್ತು CEO ಗಳ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಕೊಟ್ಟ ಸೂಚನೆ:
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿ ಅಂಶಗಳಲ್ಲಿಹಲವು ಜಿಲ್ಲೆಗಳಲ್ಲಿ ಲಿಂಗಾನುಪಾತ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಪ್ರತಿ ಮೂರು ತಿಂಗಳಿಗೊಮ್ಮೆ ಪಿಸಿ& ಪಿಎನ್ಡಿಟಿ ಕಾಯ್ದೆಯನ್ವಯ ಸ್ಕ್ಯಾನಿಂಗ್ ಕೇಂದ್ರಗಳ ತಪಾಸಣೆ ನಡೆಸಲು ಸೂಚಿಸಿದರು.
- ಗರ್ಭವತಿ ಮಹಿಳೆಯರ ದತ್ತಾಂಶದ ಮೇಲೆ ಜಿಲ್ಲಾಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಸೂಚಿಸಿದರು.
- 2015 ರಲ್ಲಿ ಉತ್ತಮ ಸೂಚ್ಯಂಕ ಹೊಂದಿದ್ದ ಕೆಲವು ಜಿಲ್ಲೆಗಳು 2022 ರಲ್ಲಿ ಕುಸಿತ ಕಂಡಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೆಣ್ಣುಮಕ್ಕಳು ಹಾಗೂ ಮಹಿಳೆಯರಲ್ಲಿ ಅನೀಮಿಯಾ ಮತ್ತು ಅಪೌಷ್ಟಿಕತೆಯ ಕುರಿತು ಹೆಚ್ಚಿನ ನಿಗಾ ವಹಿಸಬೇಕು. ಆಸ್ಪತ್ರೆಗಳಲ್ಲಿಯೇ ಹೆರಿಗೆಯಾಗುವುದನ್ನು ಖಾತರಿಪಡಿಸಬೇಕು ಎಂದು ಸೂಚಿಸಿದರು.
- ತಾಯಿ ಮರಣ ತಪಾಸಣೆಯನ್ನು (Death Audit) ಜಿಲ್ಲಾಧಿಕಾರಿಗಳು ನಿಯಮಿತವಾಗಿ ನಡೆಸಬೇಕು. ಲಸಿಕೆ ಕಾರ್ಯಕ್ರಮಗಳಲ್ಲಿಯೂ ಸಾಧನೆ ಉತ್ತಮ ಪಡಿಸಬೇಕೆಂದು ತಿಳಿಸಿದರು.
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಹಿಂದುಳಿದ ವರ್ಗಗಳ ಹಾಸ್ಟೆಲುಗಳಿಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಂದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸೂಚಿಸಲಾಯಿತು. - 2443 ಹಾಸ್ಟೆಲುಗಳಲ್ಲಿ ಕೇವಲ 981 ಹಾಸ್ಟೆಲುಗಳಿಗೆ ಮಾತ್ರ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಉಳಿದ 1462 ಹಾಸ್ಟೆಲುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.
- ಪ್ರತಿ ತಿಂಗಳು ಹಾಸ್ಟೆಲುಗಳಿಗೆ ದಿಢೀರ್ ಭೇಟಿ ಮಾಡಬೇಕು. ಇದರಿಂದ ಹಾಸ್ಟೆಲುಗಳ ಕುಂದುಕೊರತೆ, ಆಹಾರದ ಗುಣಮಟ್ಟ ಮತ್ತಿತರ ಸಮಸ್ಯೆಗಳು ಅರಿವಿಗೆ ಬರುತ್ತವೆ.
ನಗರ ಸ್ಥಳೀಯ ಸಂಸ್ಥೆಗಳು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೀಟ್ ಪಂಪ್ಗಳನ್ನು ಒದಗಿಸಲು ಸೂಚಿಸಿದರು.ʼ - ಹಾಸ್ಟೆಲುಗಳ ತ್ಯಾಜ್ಯ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
ಹಾಸ್ಟೆಲುಗಳ ಕಟ್ಟಡ ನಿರ್ಮಾಣಕ್ಕಾಗಿ 120 ನಿವೇಶನಗಳನ್ನು ಒದಗಿಸಲು ಕೂಡಲೇ ಕ್ರಮ ವಹಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಹಾಸ್ಟೆಲುಗಳಿಗೆ ತಡೆಗೋಡೆ ಆವರಣ ನಿರ್ಮಿಸಲು ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ