ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಬರಗಾಲ ಘೋಷಿಸಲಾಗಿದೆ. 161 ತಾಲೂಕುಗಳನ್ನು ತೀವ್ರ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ಘೋಷಿಸಲಾಗಿದೆ. ಮುಂದಿನ 6 ತಿಂಗಳವರೆಗೆ ರಾಜ್ಯದಲ್ಲಿ ಬರ ಕಾಮಗಾರಿಗಳು ನಡೆಯಲಿವೆ.
ಬೆಳಗಾವಿ ಜಿಲ್ಲೆಯ ಬೆಳಗಾವಿ ಹೊರತುಪಡಿಸಿ ಉಳಿದ ಎಲ್ಲ ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಲಾಗಿದೆ.
ಕೇಂದ್ರ ಸರ್ಕಾರದ ಬರ ನಿರ್ವಹಣೆ – 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ: ಸಮೀಕ್ಷೆಯ(Ground Truthing) ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದ್ದು, ಈ ಪೈಕಿ 161 ತಾಲ್ಲೂಕುಗಳನ್ನು ನೀವು ಬರಪೀಡಿತ ತಾಲ್ಲೂಕು (ಅನುಬಂಧ-1) ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು (ಅನುಬಂಧ-2) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಘೋಷಿಸಿ ಆದೇಶಿಸಲಾಗಿದೆ.
ಸಂಬಂಧಪಟ್ಟ, ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ SDRF/NDRF ನಿಯಮಗಳನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.
ಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ